ಕನ್ನಡದ ಖ್ಯಾತ ಕಿರುತೆರೆ ನಟ ಶ್ರೀಧರ ನಾಯಕ ನಿಧನ

ಬೆಂಗಳೂರು: ಕನ್ನಡ ಕಿರುತೆರೆಯ (Kannada Serial) ಖ್ಯಾತ ನಟ ಶ್ರೀಧರ್ ನಾಯಕ (47) ಮೇ 26ರ ರಾತ್ರಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ.
‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದರು. ಇನ್‌ಫೆಕ್ಷನ್‌ನಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಹೆಬ್ಬಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ದಾಖಲಿಸಲಾಗಿತ್ತು. ಅವರ ತಾಯಿ ಅವರನ್ನು ನೋಡಿಕೊಳ್ಳುತ್ತಿದ್ದರು. ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಈ ಹಿನ್ನೆಲೆ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಕಿರುತೆರೆಯ ಅನೇಕ ಗೆಳೆಯರು ಸಹ ಸಹಾಯ ಮಾಡಿದ್ದರು.
ವಧು, ಪಾರು ಸೇರಿದಂತೆ ಹಲವು ಸೀರಿಯಲ್‌ನಲ್ಲಿ ಅವರು ನಟಿಸಿದ್ದಾರೆ. ‘ಮಂಗಳ ಗೌರಿ’ ಸೇರಿದಂತೆ 40ಕ್ಕೂ ಅಧಿಕ ಧಾರವಾಹಿಗಳಲ್ಲಿ ನಟಿಸಿದ್ದರು. ಮ್ಯಾಕ್ಸ್‌ ಸಿನೆಮಾದಲ್ಲಿಯೂ ನಟಿಸಿ ಅವರು ಗಮನ ಸೆಳೆದಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement