ಕಾರವಾರ: ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಎಲ್ಲ ಅಂಗನವಾಡಿಗಳಿಗೆ ಮೇ 29 ರಂದು ಬುಧವಾರ ರಜೆ ಘೋಷಣೆ ಮಾಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯಿ ಮೇ 29ರ ಬೆಳಿಗ್ಗೆ 8:30 ವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಇರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಮೇ 29 ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಆದರೆ ಮೇ 29ರಂದು ಶಾಲೆಗಳಿಗೆ ರಜೆ ನೀಡಿಲ್ಲವಾದರೂ ಈ ದಿನ ಶಿಕ್ಷಕರಿಗೆ ಮಾತ್ರ ಬರುವಂತೆ ಸೂಚಿಸಲಾಗಿದೆ. ಮಕ್ಕಳು ಶಾಲೆಗೆ ಬರಬೇಕಿಲ್ಲ ಎಂದು ತಿಳಿಸಲಾಗಿದೆ. ಉತ್ತರ ಕನ್ನಡ ಕಾರವಾರ ಶೈಕ್ಷಣಿಕ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವುದರಿಂದ ಹವಾಮಾನ ಇಲಾಖೆಯಿಂದ ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, ಶಾಲೆಗಳಿಗೆ ರಜೆ ಘೋಷಿಸಲು ಉಲ್ಲೇಖಿತ (2) ರಲ್ಲಿ ಈ ಕಚೇರಿಯಿಂದ ಮಾಹಿತಿ ನೀಡಲು ತಿಳಿಸಿದ ಪ್ರಕಾರ ದಿನಾಂಕ: 29/05/2025 ರಂದು 2025-26 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುವಾಗುವಂತೆ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಶಾಲೆಗಳಿಗೆ ಹಾಜರಾಗಿ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲು ಹಾಗೂ ದಿನಾಂಕ: 30/05/2025 ರಿಂದ ಶಾಲೆಗಳನ್ನು ಪ್ರಾರಂಭಿಸಲು ಉತ್ತರ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೂಚಿಸಿದ್ದಾರೆ.
ಈ ಪ್ರಯುಕ್ತ ಮೇ 29ರಂದು ಶಾಲೆಗಳಿಗೆ ವಿದ್ಯಾರ್ಥಿಗಳು ಬಾರದೇ ಇರುವುದರಿಂದ ಶಾಲೆಗಳಿಗೆ ರಜೆ ಘೋಷಿಸುವುದು ಅಗತ್ಯವಿರುವುದಿಲ್ಲ ಎಂದು ಉತ್ತರ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಜಿಲ್ಲಾಧಿಕಾರಿಗಳ ಅವಗಾಹನೆಗೆ ತಂದಿದ್ದಾರೆ..
ನಿಮ್ಮ ಕಾಮೆಂಟ್ ಬರೆಯಿರಿ