ಬೆಳಗಾವಿ: ಕೊರೊನಾ ಸೋಂಕಿತ ವೃದ್ಧರೊಬ್ಬರು ಬೆಳಗಾವಿಯಲ್ಲಿ ಮೃತಪಟ್ಟಿದ್ದಾರೆ. ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧರು ಮೃತಪಟ್ಟಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ತಾಲೂಕಿನ ವೃದ್ಧರೊಬ್ಬರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಲಾಗಿದೆ. ಅವರು ಮಧುಮೇಹ, ಕಿಡ್ನಿ ತೊಂದರೆ ಸೇರಿದಂತೆ ಕೆಲವು ತೊಂದರೆಯಿಂದ ಬಳಲುತ್ತಿದ್ದರು. ನಂತರ ಅವರಿಗೆ ಕೊರೊನಾ ಲಕ್ಷಣಗಳು ಸಹ ಇದ್ದುದರಿಂದ ಅವರನ್ನು ಜಿಲ್ಲಾಸ್ಪತ್ರೆ ಬೀಮ್ಸ್‌ಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ಬುಧವಾರ ಸಂಜೆ ರ್ಯಾಪಿಡ್ ಟೆಸ್ಟ್ ಮಾಡಿದಾಗ ಕೋವಿಡ್ ಪಾಸಿಟಿವ್ ಎಂದು ಬಂದಿತ್ತು. ತಕ್ಷಣವೇ ಅವರನ್ನು ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ 70 ವರ್ಷದ ವೃದ್ಧರು ತಡರಾತ್ರಿ ಮೃತಪಟ್ಟಿದ್ದಾರೆ. ಕೊವಿಡ್ ನಿಯಮಾವಳಿ ಪ್ರಕಾರವೇ ರಾತ್ರಿಯೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೆರಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ