ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ಮೇ 31ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ (ಮೇ 31) ರಂದು ಎಲ್ಲ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, (ಸಿಬಿಎಸ್​ಸಿ, ಐಸಿಎಸ್ಇ ಸೇರಿದಂತೆ), ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ 31 ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆ ಪರಿಣಾಮದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು ಮೇ 31 ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಆದೇಶ ಮಾಡಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement