ಕಸಾಪ ಅಧ್ಯಕ್ಷ ಮಹೇಶ ಜೋಶಿಗೆ ನೀಡಿದ್ದ ಸಚಿವ ದರ್ಜೆ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Mahesh joshi) ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-2 ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದಾರೆ. ಕೆಲವು ಸಾಹಿತಿಗಳು ಮಹೇಶ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅವರನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಲಾಗಿತ್ತು. ಈ ಮೊದಲು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನ ನೀಡಿರಲಿಲ್ಲ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

4 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement