ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಚರ್ಚಿಸುತ್ತಿರುವಾಗ, ಸೋಮವಾರ (ಜೂನ್ 30, 2025) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ ಮತ್ತು ಈ ವಿಚಾರದಲ್ಲಿ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬೇಡಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ … Continued

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳ (Heart Attacks) ಸಂಖ್ಯೆ ಹೆಚ್ಚಳವಾಗುತ್ತಿದ್ದು, , ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ ಅವರ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆ ಮಾಡಿದೆ. ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ಅಧ್ಯಯನ ನಡೆಸಿ, 10 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದು … Continued

ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

ಮಂಗಳೂರು : ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ನಾಟಕ ಬ್ಯಾಂಕ್‌ನ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯಕಾರಿ ನಿರ್ದೇಶಕ ಶೇಖರ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿನ ಆಡಳಿತ ಮಂಡಳಿಯು ಈ ಸ್ಥಾನಗಳಿಗೆ ಹೊಸಬರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿದೆ. ಕರ್ಣಾಟಕ ಬ್ಯಾಂಕ್‌ ಎಂಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ … Continued

ಔಷಧ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟ : 12 ಸಾವು, 13 ಕಾರ್ಮಿಕರ ರಕ್ಷಣೆ

ಹೈದರಾಬಾದ್ : ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಸಮೈಲಾರಂ ಹಂತ 1 ರ ಪ್ರದೇಶದ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ 12 ಜನರು ಸಾವಿಗೀಡಾಗಿದ್ದಾರೆ ಹಾಗೂ 13 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಸ್ಫೋಟ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಾರ್ಖಾನೆಯಲ್ಲಿನ ರಿಯಾಕ್ಟರ್ ಸ್ಫೋಟಗೊಂಡ ನಂತರ ನಡೆದ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್‌ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ … Continued

ಮೈ ಜುಂ ಎನ್ನುವ ವೀಡಿಯೊ : ಒಮ್ಮೆಗೇ ಧುಮ್ಮಿಕ್ಕಿದ ನೀರಿನ ಝರಿಯಲ್ಲಿ ಜಾರಿಬಿದ್ದ 6 ಮಹಿಳೆಯರು ಸ್ವಲ್ಪದರಲ್ಲೇ ಪಾರು…!

ಗಯಾ: ಬಿಹಾರದ ಗಯಾ ಜಿಲ್ಲೆಯ ಲಂಗುರಿಯಾ ಬೆಟ್ಟದ  ದೊಡ್ಡ ಝರಿಯಲ್ಲಿ ಹಠಾತ್‌ ಹೆಚ್ಚಾದ ನೀರಿನ ರಭಸಕ್ಕೆ ಜಾರಿದ ಆರು ಮಹಿಳೆಯರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ನಡೆದ ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜಲಮೂಲಗಳ ಬಳಿ ಮಳೆಗಾಲದ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜ್ಞಾಪನೆಯೂ ಆಗಿದೆ. ಸುಮಾರು ಎರಡು … Continued

ಮಳೆಯಲ್ಲಿ ಆಟವಾಡುತ್ತೇನೆಂದು ಹಠ ಮಾಡಿದ್ದಕ್ಕೆ 10 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಂದ ತಂದೆ…!

ನವದೆಹಲಿ: ದೆಹಲಿಯಲ್ಲಿ ಶನಿವಾರ 10 ವರ್ಷದ ಬಾಲಕನೊಬ್ಬ ಮಳೆಯಲ್ಲಿ ಆಟವಾಡಲು ಹೊರಗೆ ಹೋಗಬೇಕೆಂದು ಹಠ ಮಾಡಿದಕ್ಕೆ ಆತನ ತಂದೆ ಆತನನ್ನು ಇರಿದು ಕೊಂದಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಪರಾಧಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ಬೆಳಿಗ್ಗೆ, ದಾದಾದೇವ ಆಸ್ಪತ್ರೆಯಿಂದ ಪೊಲೀಸರಿಗೆ ಮಗುವಿಗೆ ಇರಿತದ ಗಾಯಗಳಾದ ಬಗ್ಗೆ ಕರೆ ಬಂದಿತು. ತನಿಖಾಧಿಕಾರಿ ತಕ್ಷಣ ಆಸ್ಪತ್ರೆಗೆ … Continued

ಬೆಳಗಾವಿ | ಮರಕ್ಕೆ ಕಟ್ಟಿ ಐವರು ಶ್ರೀರಾಮಸೇನೆ ಕಾರ್ಯಕರ್ತರಿಗೆ ಥಳಿತ

ಬೆಳಗಾವಿ : ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ಯುವಕರ ಗುಂಪು ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ವರದಿಯಾಗಿದೆ. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿವೆ. ಗೋ ಸಾಗಣೆ ತಡೆಯಲು ಮುಂದಾಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಘಟನೆಗೂ ಗೋ ರಕ್ಷಣೆಗೂ … Continued

ಜುಲೈ 7ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.ಜೂನ್‌ 30ರಿಂದ ದಕ್ಷಿಣ ಕನ್ನಡ, … Continued