ಹುಬ್ಬಳ್ಳಿ: ನಿರಂತರ ನೀರು ಪೂರೈಕೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ನಗರದ ಮಂಟೂರು ರಸ್ತೆ ಅರಳಿಕಟ್ಟಿ ಓಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.
ಮೃತಪಟ್ಟ ಕಾರ್ಮಿಕನನ್ನು ಚೇತನ ಜಾಧವ (೩೫) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ತಾಲೂಕಿನ ಕಡಪಟ್ಟಿ ಹಳ್ಯಾಳ ಗ್ರಾಮದ ಮೌಲಾಸಾಬ್ ಮ್ಯಾಗಳಮನಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಂತರ ನೀರು ಪೂರೈಕೆ ಪೈಪ್ ಲೈನ್ ಅಳವಡಿಕೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುಮಾರು ಏಳೆಂಟು ಅಡಿ ಮಣ್ಣು ತೆಗೆದು, ಪೈಪ್ ಅಳವಡಿಸುವ ಕಾಮಗಾರಿ ಮಂಟೂರು ರಸ್ತೆಯಲ್ಲಿ ಕೆಲ ದಿನಗಳಿಂದ ನಡೆಯುತ್ತಿತ್ತು. ಚೇತನ ಜೊತೆ ಮತ್ತೊಬ್ಬ ಕಾರ್ಮಿಕ ಕೆಲಸ ಮಾಡುತ್ತಿದ್ದ. ಕೆಳಗೆ ಇಳಿದು ಚೇತನ ಮಣ್ಣು ತೆಗೆಯುತ್ತಿದ್ದಾಗ, ಏಕಾಏಕಿ ಮಣ್ಣು ಕುಸಿದು, ಅವರ ಮೇಲೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ