ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಎಜಿಡಿಪಿ ಹೆಂತ ನಿಂಬಾಳ್ಕರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ ಅವರನ್ನು ತಕ್ಷಣದಿದಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.
ಗೋವಿಂದರಾಜ ಅವರನ್ನು ಜೂನ್ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಗೋವಿಂದರಾಜ ಒತ್ತಡ ಹೇರಿದ್ದರು ಎಂಬ ಆರೋಪ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕುತ್ತು ಬಂದಿದೆ ಎಂದು ಹೇಳಲಾಗಿದೆ.
ಇನ್ನು ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದ ಘಟನೆಗೆ ಗುಪ್ತಚರ ವೈಫಲ್ಯವೂ ಕಾರಣ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ಬೆನ್ನಲ್ಲೇ ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ ನಿಂಬಾಳ್ಕರ್ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನೂತನ ಎಡಿಜಿಪಿಯಾಗಿ ರವಿಕುಮಾರ ಅವರನ್ನು ನೇಮಕ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ