ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ.
ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ವಿಚಾರಣೆ ಸಮಯದಲ್ಲಿ ಈತ, ಕೆಲ ದಿನಗಳ ಹಿಂದೆ ತನ್ನ ಪತ್ನಿಗೆ ಬೇರೊಬ್ಬರ ಜೊತೆ ಸಂಬಂಧ ಇರುವುದು ಗೊತ್ತಾಗಿದೆ, ಇದರಿಂದಾಗಿ ನಮ್ಮ ನಡುವೆ ಜಗಳವಾಗಿತ್ತು. ನಂತರ ಆಕೆ ತನ್ನ ತಾಯಿಯ ಮನೆಗೆ ಹೋಗಿದ್ದಳು. ತಮ್ಮ ಮಗಳಿಗಾಗಿ ರಾಜಿ ಮಾಡಿಕೊಳ್ಳಲು ಆಕೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ, ಮನೆಗೆ ಮರಳಿದ್ದಳು ಎಂದು ಪೊಲೀಸರಿಗೆ ತಿಳಿಸಿದ್ದಾನೆ.
ಇಬ್ಬರ ನಡುವೆ ಜಗಳ ನಡೆದಾಗ ತನಗೆ ಯಾವುದೇ ವಿವಾಹೇತರ ಸಂಬಂಧವಿಲ್ಲ ಎಂದು ಸಂತ್ರಸ್ತೆ ವಾದಿಸಿದ ನಂತರ ಜಗಳ ಜೋರಾಗಿ ಆತ ಕುಡುಗೋಲು ತೆಗೆದುಕೊಂಡು ಪತ್ನಿಯ ಶಿರಚ್ಛೇದ ಮಾಡಿದ್ದಾನೆ. ಬಳಿಕ ಆತ ಕತ್ತರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ವೇಳೆ ಶಂಕರ ಆಕೆಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ ಎಂದು ತಿಳಿದುಬಂದಿದೆ ಮತ್ತು ಅದಕ್ಕಾಗಿಯೇ ಆತ ಅಂಗಡಿಯಿಂದ ಕುಡುಗೋಲು ಖರೀದಿಸಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂರ್ಯನಗರ ಠಾಣೆಯ ಪೊಲೀಸ್ ಸಿಬ್ಬಂದಿ ಅಪರಾಧ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಶಂಕರನನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ