ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಲಕ್ಷ್ಮಣ ಸವದಿ ಅವರು ಅಥಣಿಯಿಂದ ಗೋಕಾಕ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಅಪಘಾತದಲ್ಲಿ ಲಕ್ಷ್ಮಣ ಸವದಿ ಕಾರಿನ ಮುಂಭಾಗ ಜಖಂಗೊಂಡಿದ್ದು ಲಕ್ಷ್ಮಣ ಸವದಿ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ