ಭಾರಿ ಮಳೆ ; ಇಂದು (ಜೂನ್ 12) ಉತ್ತರ ಕನ್ನಡ ಜಿಲ್ಲೆ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಗುರುವಾರ (ಜೂನ್ 12) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್ 12) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಘಟಕ ಜೂನ್‌ 17ರ ವರೆಗೆ ಭಾರಿ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದೆ. ವಿಶೇಷವಾಗಿ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಜೂನ್ 12ರಂದು ಈ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement