ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು (ಜೂನ್ 13) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಶುಕ್ರವಾರ (ಜೂನ್ 13) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜೂನ್ 13) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಘಟಕ ಜೂನ್‌ 17ರ ವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದೆ. ವಿಶೇಷವಾಗಿ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಜೂನ್ 13ರಂದು ಈ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ

ಪ್ರಮುಖ ಸುದ್ದಿ :-   ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement