ಜೂನ್‌ 17ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಜೋರಾದ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 14ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ (Red Alert) ಘೋಷಿಸಿದೆ.
ಹಾಸನ, ಮೈಸೂರು, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಬಿರುಗಾಳಿಯು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುವ ಸಂಭವ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಲಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ಜೂನ್‌ 15ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್‌ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಜೂನ್‌ 16ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ನೀಡಲಾಗಿದೆ. ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಜೂನ್‌ 17ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement