ಮಂಗಳೂರು/ಉಡುಪಿ : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳು ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಜೂನ್ 16ರಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 16ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 16 ಸೋಮವಾರದಂದು ರಜೆ ಘೋಷಿಸಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು ಸೇರಿದಂತೆ ಈ ಪ್ರದೇಶಗಳಲ್ಲಿ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ