ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 16 ರಿಂದ 18 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 16 ರಂದು ಕರಾವಳಿಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಜೂನ್ 17, 18ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಜೂ.16 ರಂದು ಆರೆಂಜ್ ಹಾಗೂ ಗದಗ ಹಾವೇರಿ, ಕೊಪ್ಪಳ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂ.17 ರಂದು ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋಅಲರ್ಟ್ ನೀಡಲಾಗಿದೆ.
ಆನಂತರದಲ್ಲಿ ಮಳೆಯ ಪ್ರಮಾಣ ತಗ್ಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ