ಬೆಂಗಳೂರು : ರಾಜ್ಯದಾದ್ಯಂತ ಜೂನ್ 23ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಹರಿವು ಇರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 20 ರವರೆಗೂ ಭಾರೀ ಮಳೆಯಾಗಲಿದೆ. ಅಲ್ಲದೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ.
ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಅತಿ ಭಾಎಇ ಮಳೆಯಾಗಲಿದೆ. ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರ ಕರ್ನಾಟಕದ ಧಾರವಾಡ, ಹಾವೇರಿಯಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಇಂದು ಬೆಳ್ಳಂಬೆಳಗ್ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇಂದು ಸಹ ಅತ್ಯಂತ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ (ಜೂನ್ 18 ಬುಧವಾರ) ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ