
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್ 21ರಂದು ಬಲವಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ನಿರಂತರ ಗಾಳಿಯೊಂದಿಗೆ (30-40 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 22ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಜೂನ್ 23ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಜೂನ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 30 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.


ನಿಮ್ಮ ಕಾಮೆಂಟ್ ಬರೆಯಿರಿ