ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಬೆಳಗಾವಿ: ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರ ಆಡಿಯೋ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಈಗ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಮತ್ತೋರ್ವ ಶಾಸಕ ತಮ್ಮ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಬಿ.ಆರ್.ಪಾಟೀಲ ಅವರು ಹೇಳಿದ್ದು ಸುಳ್ಳಲ್ಲ, ಅವರು ಹೇಳಿದ್ದರಲ್ಲಿ ನಿಜಾಂಶವಿದೆ. ಬಿ. ಆರ್. ಪಾಟೀಲ ಹೇಳಿದ್ದಕ್ಕಿಂತ ಹೆಚ್ಚಾಗಿದೆ. ಅದರ ಅಪ್ಪನ ಹಾಗೆ ನನ್ನ ಪರಿಸ್ಥಿತಿ ಆಗಿದೆ ಎಂದು ರಾಜು ಕಾಗೆ ಹೇಳಿದ್ದಾರೆ. ಎಂದರು.

ರಾಜೀನಾಮೆ ಕೊಟ್ಟರೂ ಅಶ್ಚರ್ಯ ಇಲ್ಲ..
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿ ಅವರ ವಿಶೇಷ ಅನುದಾನ ಬಂದಿದೆ. 25 ಕೋಟಿ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. ಕೆಲಸವೇ ಆಗುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಇದರಿಂದ ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಮುಖ್ಯಮಂತ್ರಿಗೆ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement