ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಆಟವಾಡುವಾಗ ಕುಸಿದುಬಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಶಿಕ್ಷಕರು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ