ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆಯ 2 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.26) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ | ಕುಮಟಾ : ಸಮುದ್ರ ತೀರದಲ್ಲಿ ಬೃಹತ್‌ ತಿಮಿಂಗಿಲದ ಮೃತದೇಹ ಪತ್ತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement