ಪಾಕಿಸ್ತಾನದಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿಗೆ 13 ಸೈನಿಕರು ಸಾವು

ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ.
“ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, 10 ಸೇನಾ ಸಿಬ್ಬಂದಿ ಮತ್ತು 19 ನಾಗರಿಕರು ಗಾಯಗೊಂಡಿದ್ದಾರೆ” ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ ವಜೀರಿಸ್ತಾನ್ ಜಿಲ್ಲೆಯ ಹೆಸರು ಬಹಿರಂಗಪಡಿಸಲಿ ಇಚ್ಛಿಸದ ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ಎಎಫ್‌ಪಿ(AFP)ಗೆ ತಿಳಿಸಿದ್ದಾರೆ.
“ಸ್ಫೋಟದ ಪರಿಣಾಮವಾಗಿ ಎರಡು ಮನೆಗಳ ಛಾವಣಿಗಳು ಕುಸಿದವು, ಆರು ಮಕ್ಕಳು ಗಾಯಗೊಂಡರು” ಎಂದು ಜಿಲ್ಲೆಯಲ್ಲಿ ಪೋಸ್ಟ್ ಮಾಡಲಾದ ಪೊಲೀಸ್ ಅಧಿಕಾರಿಯೊಬ್ಬರು ಎಎಫ್‌ಪಿಗೆ ತಿಳಿಸಿದ್ದಾರೆ. ನಾಲ್ವರು ಗಾಯಗೊಂಡ ಸೈನಿಕರ ಸ್ಥಿತಿ ಗಂಭೀರವಾಗಿದೆ ಎಂದು ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನ ತಾಲಿಬಾನ್‌ನ ಒಂದು ಬಣವಾದ ಹಫೀಜ್ ಗುಲ್ ಬಹದ್ದೂರ್ ಸಶಸ್ತ್ರ ಗುಂಪಿನ ಆತ್ಮಹತ್ಯಾ ಬಾಂಬರ್ ವಿಭಾಗವು ಈ ದಾಳಿಯನ್ನು ನಡೆಸಿದೆ ಎಂದು ಹೇಳಿಕೊಂಡಿದೆ. 2021 ರಲ್ಲಿ ಕಾಬೂಲ್‌ನಲ್ಲಿ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದ ನಂತರ ಪಾಕಿಸ್ತಾನವು ಅಫ್ಘಾನಿಸ್ತಾನದ ಗಡಿಯಲ್ಲಿರುವ ತನ್ನ ಪ್ರದೇಶಗಳಲ್ಲಿ ಹಿಂಸಾಚಾರದಲ್ಲಿ ತೀವ್ರ ಏರಿಕೆ ಕಂಡಿದೆ, ಪಾಕಿಸ್ತಾನವು ತನ್ನ ದೇಶದ ಸೈನಿಕರ ವಿರುದ್ಧ ದಾಳಿಗೆ ಅಪಘಾನಿಸ್ತಾನವು ತನ್ನ ನೆಲವನ್ನು ಬಳಸಲು ಅವಕಾಶ ನೀಡಿದೆ ಎಂದು ಆರೋಪಿಸಿದೆ. ಈ ಹೇಳಿಕೆಯನ್ನು ತಾಲಿಬಾನ್ ನಿರಾಕರಿಸುತ್ತದೆ.
ವರದಿಗಳ ಪ್ರಕಾರ, ಈ ವರ್ಷದ ಆರಂಭದಿಂದ ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನದಲ್ಲಿ ಸರ್ಕಾರದ ವಿರುದ್ಧ ಹೋರಾಡುವ ಸಶಸ್ತ್ರ ಗುಂಪುಗಳು ನಡೆಸಿದ ದಾಳಿಗಳಲ್ಲಿ ಸುಮಾರು 290 ಜನರು ಸಾವಿಗೀಡಾಗಿದ್ದಾರೆ, ಅವರಲ್ಲಿ ಹೆಚ್ಚಾಗಿ ಭದ್ರತಾ ಸಂಸ್ಥೆಗಳ ಸಿಬ್ಬಂದಿ ಸೇರಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement