ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್‌ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಇವರಲ್ಲಿ 87 ಜನರು ಪಾಲ್ಗೊಂಡಿದ್ದರು. ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಮೇಯರ್‌ ಸ್ಥಾನ ಹಿಂದುಳಿದ ವರ್ಗ ʼಬಿʼ ಕ್ಕೆ ಮೀಸಲಾಗಿತ್ತು.

ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಆಗಿ 19ನೇ ವಾರ್ಡ್ ಸದಸ್ಯರಾದ ಜ್ಯೋತಿ ಪಾಟೀಲ 47 ಮತಗಳನ್ನು ಪಡೆದು ಆಯ್ಕೆಯಾದರು. 49ನೇ ವಾರ್ಡ್ ಸದಸ್ಯೆಯರಾದ ಸಂತೋಷ ಚವ್ಹಾಣ 47 ಮತಗಳನ್ನು ಪಡೆದು ಉಪ ಮೇಯರ್ ಆಗಿ ಆಯ್ಕೆಯಾದರು.
ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ 59ನೇ ವಾರ್ಡ್ ಕಾಂಗ್ರೆಸ್​ ಸದಸ್ಯರಾದ ಸುವರ್ಣ ಕಲಕುಂಟ್ಲ 37 ಹಾಗೂ 76 ನೇ ವಾರ್ಡ ಸದಸ್ಯರಾದ ವಹೀದಾ ಖಾನಂ ಅಲ್ಲಾಭಕ್ಷ ಕಿತ್ತೂರು 3 ಮತಗಳನ್ನು ಪಡೆದರು. ಉಪಮೇಯರ್‌ ಸ್ಥಾನಕ್ಕೆ 14ನೇ ವಾರ್ಡ್ ಕಾಂಗ್ರೆಸ್‌ ಸದಸ್ಯರಾದ ಶಂಭುಗೌಡ ರುದ್ರಗೌಡ ಸಾಲಮನಿ 37 ಮತಗಳನ್ನು ಪಡೆದರು. ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು. ಪಾಲಿಕೆಯ 24ನೇ ಅವಧಿಗೆ ಮಹಾಪೌರರಾಗಿ ಜ್ಯೋತಿ ಪಾಟೀಲ ಹಾಗೂ ಉಪಮಹಾಪೌರರಾಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ.

ಪ್ರಮುಖ ಸುದ್ದಿ :-   ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement