ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.ಜೂನ್ 30ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಜುಲೈ 5ರವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಜುಲೈ 2ರಿಂದ 7ರ ವರೆಗೆ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.
ಜುಲೈ 3ರಿಂದ 7ರ ವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ವರೆಗೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಭಾನುವಾರದಿಂದ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.29ರಿಂದ ಜು.1ರವರೆಗೆ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 30-40 ಕಿ.ಮೀ ಇರಲಿದ್ದು, ಒಳನಾಡಿನ ಜಿಲ್ಲೆಗಳಲ್ಲಿ 40-50 ಕಿ.ಮೀ ಇರಲಿದೆ ಎಂದು ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ