ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ಅಮೆರಿಕ ಅಧ್ಯಕ್ಷ ಟ್ರಂಪ್‌ ಜೊತೆ ಜಗಳ : ಒಂದೇ ದಿನ 2,91,682.26 ಕೋಟಿ ರೂ. ಸಂಪತ್ತು ಕಳೆದುಕೊಂಡ ಎಲೋನ್‌ ಮಸ್ಕ್‌..! ಟೆಸ್ಲಾ ಕಂಪನಿಗೆ ಇನ್ನೂ ಹಾನಿ

ಟೆಸ್ಲಾ ಸಿಇಒ ಎಲೋನ್ ಮಸ್ಕ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಉದ್ವಿಗ್ನತೆ ಹೆಚ್ಚಾದ ನಂತರ ಮಸ್ಕ್ ಅವರ ವೈಯಕ್ತಿಕ ಸಂಪತ್ತು $34 ಬಿಲಿಯನ್‌(2,91,682.26 ಕೋಟಿ ರೂ.ಗಳು)ನಷ್ಟು ಕರಗಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಈ ಕುಸಿತವು ಎಲೋನ್ ಮಸ್ಕ್ ಅವರ ನಿವ್ವಳ ಮೌಲ್ಯವನ್ನು $334.5 ಬಿಲಿಯನ್‌ಗೆ ಇಳಿಸಿತು – ಇದು ಸೂಚ್ಯಂಕದಲ್ಲಿ ಇದುವರೆಗೆ … Continued

ಶಾಸಕ ವಿನಯ ಕುಲಕರ್ಣಿಗೆ ಸಂಕಷ್ಟ ; ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ (yogesh gowda Murder Case) ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ(Vinay Kulkarni) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಹಾಗೂ ಒಂದು ವಾರದಲ್ಲಿ ಕೋರ್ಟ್ … Continued

ಈ ತಿಂಗಳು ಕೆನಡಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಮೋದಿಗೆ ಆಹ್ವಾನ ನೀಡಿದ ಪ್ರಧಾನಿ ಮಾರ್ಕ್ ಕಾರ್ನಿ

ನವದೆಹಲಿ: ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ನೇತೃತ್ವದಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದ್ದ ಭಾರತ-ಕೆನಡಾ ಸಂಬಂಧಗಳು ಚೇತರಿಸಿಕೊಳ್ಳುತ್ತಿರುವ ದೊಡ್ಡ ಸಂಕೇತವಾಗಿ, ಅವರ ಉತ್ತರಾಧಿಕಾರಿ ಹಾಲಿ ಪ್ರಧಾನಿ ಮಾರ್ಕ್ ಕಾರ್ನಿ ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದಾರೆ. ಜೂನ್ 15 ರಿಂದ 17 ರವರೆಗೆ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ … Continued

ಆರ್‌ ಬಿಐನಿಂದ ರೆಪೊ ದರ ಕಡಿತ: ಇದು ಗೃಹ ಸಾಲಗಳ ಇಎಂಐ, ಫಿಕ್ಸಡ್‌ ಡಿಪಾಸಿಟ್‌ ಮೇಲೆ ಹೇಗೆ ಪರಿಣಾಮ ಬೀರುತ್ತದೆ..?

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಒಂದು ಪ್ರಮುಖ ನಿರ್ಧಾರದಲ್ಲಿ ಪ್ರಮುಖ ಬಡ್ಡಿದರವಾದ ರೆಪೊ ದರವನ್ನು 0.50% ರಷ್ಟು ಕಡಿತಗೊಳಿಸಿ, ಅದನ್ನು 5.50% ಕ್ಕೆ ಇಳಿಸಿತು. ಈ ಕ್ರಮವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯಲು ಸಹಾಯ ಮಾಡಲು ವಿನ್ಯಾಸಗೊಳಿಸಲಾಗಿದೆ. ಗೃಹ ಸಾಲ ಪಡೆಯುವವರಿಗೆ, ಇದು ಒಳ್ಳೆಯ ಸುದ್ದಿ. ಬಾಹ್ಯ ಮಾನದಂಡ ಸಾಲ ದರ (EBLR)ಕ್ಕೆ ಸಂಬಂಧಿಸಿದ … Continued

ಪಾಕಿಸ್ತಾನದಲ್ಲಿ ಜಲ ಬಿಕ್ಕಟ್ಟು | ಸಿಂಧೂ ಜಲ ಒಪ್ಪಂದ ಅಮಾನತು ಬೇಡ ; ಭಾರತಕ್ಕೆ 4 ಪತ್ರ ಬರೆದ ಪಾಕಿಸ್ತಾನ…!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಸ್ಥಗಿತಗೊಳಿಸಿದ ನಿರ್ಧಾರವನ್ನು ಭಾರತವು ಮರುಪರಿಶೀಲಿಸಬೇಕು ಎಂದು ಕೋರಿ ಪಾಕಿಸ್ತಾನವು ಒಂದರ ನಂತರ ಒಂದರಂತೆ ನಾಲ್ಕು ಪತ್ರಗಳನ್ನು ಬರೆದಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಮತ್ತು ಹತಾಶವಾಗಿರುವಂತೆ ತೋರುತ್ತಿದೆ ಎಂದು ಈ … Continued

ವಿರಾಟ್ ಕೊಹ್ಲಿಗೆ ಸಂಕಷ್ಟ…? ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು .ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ … Continued

ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅಮಾನತು ಖಂಡಿಸಿ ಪೊಲೀಸ್‌ ಕಾನ್‌ಸ್ಟೇಬಲ್‌ ಪ್ರತಿಭಟನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಐವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಏಕಾಏಕಿ ಮಾಡಿರುವ ದಯಾನಂದ್ ಅವರ ರದ್ದುಪಡಿಸಬೇಕೆಂದು ಒತ್ತಾಯಿಸಿ ರಾಜಭವನ ಮುಂದೆ ಹೆಡ್​ ಕಾನ್ಸ್​ಟೇಬಲ್​ ಏಕಾಂಗಿ ಪ್ರತಿಭಟನೆ ನಡೆಸಿದರು. ತೋಳಿಗೆ ಕಪ್ಪುಪಟ್ಟಿ ಧರಿಸಿ ಅಂಬೇಡ್ಕರ್ ಫೋಟೊ ಹಿಡಿದುಕೊಂಡು ಅವರು ರಾಜಭವನ ಮುಂದೆ … Continued

ಕೊಲೆಯಾದ ವ್ಯಕ್ತಿ ಜೀವಂತವಾಗಿ ಪತ್ತೆ…! 3 ವರ್ಷದಿಂದ ಜೈಲಿನಲ್ಲಿದ್ದ ಕೊಲೆ ಆರೋಪಿ ಬಿಡುಗಡೆ…!!

ಬರೇಲಿ : ರೈಲಿನಲ್ಲಿ ಮೊಬೈಲ್ ಕಳ್ಳತನದ ವಿಚಾರಕ್ಕೆ ನಡೆದ ಜಗಳದಲ್ಲಿ ಕೊಲೆಯಾಗಿದ್ದಾರೆ ಎಂದು ಭಾವಿಸಲಾದ ವ್ಯಕ್ತಿಯೊಬ್ಬರು ಇತ್ತೀಚೆಗೆ ಬಿಹಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ….! ಈ ಪ್ರಕರಣದಲ್ಲಿ ಕೊಲೆ ಆಪಾದನೆ ಹೊತ್ತು ಜೈಲು ಸೇರಿದ್ದ ಅಯೋಧ್ಯೆಯ ನಿವಾಸಿಯನ್ನು ಮೂರು ವರ್ಷಗಳ ನಂತರ ಬಿಡುಗಡೆ ಮಾಡಲಾಗಿದೆ. ಅಯೋಧ್ಯೆಯ ಖೇಮಸರಾಯ್ ಗ್ರಾಮದ ಮೂಲದ ನರೇಂದ್ರ ದುಬೆ, ಹತ್ತಿರದ ಶಹಜಹಾನ್‌ಪುರ ಜಿಲ್ಲೆಯ ವ್ಯಾಪ್ತಿಯಲ್ಲಿ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued