ವಾಲ್ಮೀಕಿ ಹಗರಣ | ರಾಜ್ಯ ಸರ್ಕಾರಕ್ಕೆ ಹಿನ್ನಡೆ, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಶುರುವಾಯ್ತು ಢವ ಢವ

ಬೆಂಗಳೂರು : ಪ್ರಮುಖ ಬೆಳವಣಿಗೆಯೊಂದರಲ್ಲಿ, ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಹಗರಣದ ತನಿಖೆಯನ್ನು ವಹಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಕೇಂದ್ರ ತನಿಖಾ ದಳ(ಸಿಬಿಐ)ಕ್ಕೆ ನಿರ್ದೇಶಿಸಿದೆ. ಈ ಆದೇಶವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಮಾತ್ರ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ರಿಟ್​ … Continued

30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್‌

ಚೆನ್ನೈ : ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. … Continued

ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ … Continued

ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೆಂಗಳೂರು : ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಆಪ್ತರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರಿಗೆ ಪರಿಚಯಿಸಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ ಮತ್ತು ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿಯೂ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರು ಹಿರಿಯ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗಳಾದ ಕೆ.ಶಾಮರಾವ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತೆ ಶೈಲಜಾ ಗೋರನಮನೆ ಅವರಿಗೆ, ಡಾ.ಯು ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಗಣೇಶ ಇಟಗಿ ಹಾಗೂ ಜಿ.ಎಸ್ ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ದೀಪಕಕುಮಾರ ಶೇಣ್ವಿ ಅವರಿಗೆ ನೀಡಿ ಗೌರವಿಸಲಾಯಿತು. ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಈತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯ ಲೋಪದ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಮಂಗಳವಾರ ವಜಾಗೊಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ವಿಕಾಸಕುಮಾರ ವಿಕಾಸ್‌ … Continued

ಅಧಿಕಾರಿಯನ್ನು ಕಚೇರಿಯಿಂದ ಹೊರಗೆಳೆದು ಥಳಿತ, ಮುಖಕ್ಕೆ ಒದ್ದು ಹಲ್ಲೆ : ಮೂವರ ಬಂಧನ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭುವನೇಶ್ವರ: ಭುವನೇಶ್ವರ ಮಹಾನಗರ ಪಾಲಿಕೆ (ಬಿಎಂಸಿ) ಕಚೇರಿಯಲ್ಲಿ ಹಿರಿಯ ಅಧಿಕಾರಿಯ ಮೇಲೆ ಗುಂಪೊಂದು ಸೋಮವಾರ ಹಲ್ಲೆ ನಡೆಸಿದ ನಂತರ ಭಾರೀ ನಾಟಕೀಯ ವಾತಾವರಣ ನಿರ್ಮಾಣವಾಯಿತು. ಆಘಾತಕಾರಿ ವಿಡಿಯೋದಲ್ಲಿ, ಬಿಎಂಸಿಯ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರನ್ನು ಆ ವ್ಯಕ್ತಿಗಳು ತಮ್ಮ ಕಚೇರಿಯಿಂದ ಹೊರಗೆ ಎಳೆದುಕೊಂಡು ಹೋಗಿ, ಪದೇ ಪದೇ ಹೊಡೆದು, ಮುಖಕ್ಕೆ ಒದೆಯುತ್ತಿರುವುದು ಕಂಡುಬಂದಿದೆ. ಕುಂದುಕೊರತೆ … Continued

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲು ಗಡಿ ಹಾಗೂ ನೀರಿನ ವಿವಾದಗಳ ಉಸ್ತುವಾರಿ ಸಚಿವರಾಗಿ ಎಚ್ ಕೆ‌ ಪಾಟೀಲ ಅವರನ್ನು ನೇಮಕ‌ ಮಾಡಲಾಗಿದೆ. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.​ಕೆ. ಪಾಟೀಲರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ … Continued

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ತೆಲಂಗಾಣ ಬಿಜೆಪಿಯಲ್ಲಿ ಬಿರುಕು ; ಬಿಜೆಪಿಗೆ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ

ಹೈದರಾಬಾದ್‌ : ತೆಲಂಗಾಣ ಬಿಜೆಪಿಗೆ ಹಿನ್ನಡೆಯಾಗಿ, ರಾಜ್ಯದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂಬ ಮಾಧ್ಯಮ ವರದಿಗಳ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಕ್ರಿಮಿನಲ್ ವಕೀಲ ಮತ್ತು ತೆಲಂಗಾಣ ಬಿಜೆಪಿಯಲ್ಲಿ … Continued