ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲು ಗಡಿ ಹಾಗೂ ನೀರಿನ ವಿವಾದಗಳ ಉಸ್ತುವಾರಿ ಸಚಿವರಾಗಿ ಎಚ್ ಕೆ‌ ಪಾಟೀಲ ಅವರನ್ನು ನೇಮಕ‌ ಮಾಡಲಾಗಿದೆ.
2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.​ಕೆ. ಪಾಟೀಲರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿತ್ತು. 2018ರ ನಂತರ ಅಧಿಕಾರಕ್ಕೆ ಬಂದ ನಂತರ ಸರ್ಕಾರ ನೇಮಕ ಮಾಡಿರಲಿಲ್ಲ. ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಗಡಿ ವಿವಾದ ಸಂಬಂಧ ಇಬ್ಬರು ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಹೀಗಾಗಿ ಈ ವಿಷಯಗಳಿಗೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ಮತ್ತು ರಾಜಕೀಯ ನೆಲೆಗಟ್ಟಿನಲ್ಲಿ ಪರಿಶೀಲಿಸಿ ಸಮಯೋಚಿತ ಅವಶ್ಯಕ ಕ್ರಮ ತೆಗೆದುಕೊಳ್ಳಲು ಸಚಿವರೊಬ್ಬರಿಗೆ ಜವಾಬ್ದಾರಿ ವಹಿಸಲು ಸರ್ಕಾರ ನಿರ್ಧರಿಸಿತ್ತು. ಈಗ ಗಡಿ ಉಸ್ತುವಾರಿ ನೋಡಿಕೊಳ್ಳಲು ಈಗ ಹೆಚ್‌.ಕೆ ಪಾಟೀಲ ಅವರನ್ನು ಸರ್ಕಾರ ನೇಮಿಸಿದೆ. ಅಲ್ಲದೆ, ಅಂತಾರಾಜ್ಯ ನದಿ ವಿವಾದಗಳಿಗೆ ಸಂಬಂಧಿಸಿಯೂ ಅವರು ನಿರಂತರ ನಿಗಾ ವಹಿಸಲಿದ್ದಾರೆ.

ಕರ್ನಾಟಕ ಸರ್ಕಾರವು 63 ತಾಲ್ಲೂಕುಗಳನ್ನು ಗಡಿ ಭಾಗದ ತಾಲ್ಲೂಕುಗಳೆಂದು ಗುರುತಿಸಿದೆ. ಇವು ಸುಮಾರು 19 ಗಡಿ ಜಿಲ್ಲೆಗಳ ವ್ಯಾಪ್ತಿಗೆ ಬರುತ್ತವೆ. ಜೊತೆಗೆ ಆರು ನೆರೆ ರಾಜ್ಯಗಳಲ್ಲಿನ ಕರ್ನಾಟಕದ ಗಡಿ ಭಾಗದ ಪ್ರದೇಶದಲ್ಲಿರುವ ಕನ್ನಡಿಗರಿಗೂ ಹಲವಾರು ಸಮಸ್ಯೆಗಳಿವೆ. ಇವರ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಸರ್ಕಾರವು 2010ರಲ್ಲಿ ʻಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರʼ ವನ್ನು ಸ್ಥಾಪಿಸಿ ಅದನ್ನು ಈಗ ಯೋಜನಾ ಆಯೋಗದ ಅಡಿಗೆ ತಂದಿದೆ.
ರಾಜ್ಯದ ಹಾಗೂ ಹೊರ ರಾಜ್ಯದ ಕನ್ನಡ ಪರ ಸಂಘ/ಸಂಸ್ಥೆಗಳಿಗೆ ಭಾಷಾ ಚಟುವಟಿಕೆಗಳಿಗಾಗಿ ಪ್ರೋತ್ಸಾಹ ನೀಡುವುದು ಹಾಗೂ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳ ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಗ್ರಂಥಾಲಯ, ಕ್ರೀಡಾ ಕೊಠಡಿ, ಶಾಲಾ ಶೌಚಾಲಯ, ಶಾಲಾ ಆವರಣ ಗೋಡೆ, ಇತ್ಯಾದಿ ಸೌಲಭ್ಯಗಳನ್ನು ಪ್ರಾಧಿಕಾರದಿಂದ ಒದಗಿಸಲಾಗುತ್ತಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement