ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ.
ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರಿಗೆ ಕಾರಣ ಕೇಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ನೋಟಿಸ್‌ ನೀಡಿದ್ದಾರೆ.
ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟೀಸ್‌ ನೀಡಲಾಗಿದೆ. ತಾವು ಈ ನೋಟಿಸ್‌ ತಲುಪಿದ ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಬೇಕು ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಸೂಚಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement