30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್‌

ಚೆನ್ನೈ : ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ. ಈತ 1999ರಿಂದ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.

ತಮಿಳುನಾಡು, ಕರ್ನಾಟಕ ರಾಜ್ಯಗಳಲ್ಲಿ ನಡೆದ ಹಲವು ಪ್ರಕರಣಗಳಲ್ಲಿ ಸಿದ್ದಿಕ್ ಆರೋಪಿಯಾಗಿದ್ದಾನೆ. 1999ರ ಬೆಂಗಳೂರು ಸ್ಫೋಟ, 2013ರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ, 2011ರಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ನೇತೃತ್ವದ ರಥಯಾತ್ರೆಯ ಮೇಲೆ ಮಧುರೈಯಲ್ಲಿ ನಡೆದ ಪೈಪ್ ಬಾಂಬ್ ದಾಳಿ, 1991ರ ಚೆನ್ನೈ ಹಿಂದೂ ಮುನ್ನಣಿ ಕಾರ್ಯಾಲಯದ ಮೇಲೆ ನಡೆದ ದಾಳಿಯಲ್ಲೂ ಈತನ ಪಾತ್ರವಿದೆ ಎಂದು ಹೇಳಲಾಗಿದೆ.
ನಾಗೂರಿನಲ್ಲಿ ಪಾರ್ಸೆಲ್ ಬಾಂಬ್ ಸ್ಫೋಟ, 1997ರಲ್ಲಿ ಚೆನ್ನೈ, ತಿರುಚಿರಾಪಳ್ಳಿ, ಕೊಯಮತ್ತೂರು ಸೇರಿ 7 ಕಡೆ ನಡೆದ ಸ್ಫೋಟ, ಚೆನ್ನೈ ಎಗ್ಮೋರ್ ಪೊಲೀಸ್ ಕಮೀಷನರ್ ಕಚೇರಿ ಸ್ಫೋಟ, 2012ರ ವೆಲ್ಲೂರು ಅರವಿಂದ ರೆಡ್ಡಿ ಕೊಲೆ ಪ್ರಕರಣದಲ್ಲೂ ಈತನ ಪಾತ್ರವಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಚರಂಡಿಯಲ್ಲಿ ಬಿದ್ದಿದ್ದ ನಾಯಿಮರಿ ರಕ್ಷಿಸುವಾಗ ಕಚ್ಚಿ ಗಾಯ ; ನಿರ್ಲಕ್ಷ್ಯ ಮಾಡಿದ್ದಕ್ಕೆ ಖ್ಯಾತ ಕಬಡ್ಡಿ ಆಟಗಾರ ರೇಬೀಸ್ ನಿಂದ ಸಾವು...!

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement