ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರು ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಬೆಂಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದ ಪ್ರಧಾನಿಯಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸವನ್ನು ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ನಂದಿ ಗಿರಿಧಾಮದಲ್ಲಿ ಬುಧವಾರ ಆಯೋಜಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ನು ಮುಂದೆ ʼಬೆಂಗಳೂರು ಉತ್ತರ ಜಿಲ್ಲೆʼ (Bangalore North District) ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣವು ಭಾಗ್ಯನಗರ ಆಗಲಿದೆ. ಮರುನಾಮಕರಣಕ್ಕೆ ಸಂಬಂಧಿಸಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
‘ಬ್ರ್ಯಾಂಡ್ ಬೆಂಗಳೂರು’ ಮೌಲ್ಯ ಮತ್ತು ಲಾಭವನ್ನು ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಿಗೂ ವಿಸ್ತರಿಸಲು ಈ ನಿರ್ಣಯ ಕೈಗೊಳ್ಳುತ್ತಿರುವುದಾಗಿ ಸರ್ಕಾರ ಸಮರ್ಥಿಸಿಕೊಂಡಿತ್ತು.

1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಚಿಸಲಾಯಿತು. ಆ ಸಮಯದಲ್ಲಿ ರಾಮನಗರ ಜಿಲ್ಲೆಯ ತಾಲೂಕುಗಳೂ ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟಿದ್ದವು. ನಂತರ 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ವಿಭಜಿಸಿ ರಾಮನಗರ ಜಿಲ್ಲೆ ರಚಿಸಲಾಯಿತು. ರಾಮನಗರ ಜಿಲ್ಲೆಯನ್ನು ಇತ್ತೀಚೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲಾಯಿತು. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಹೆಸರನ್ನು ‘ಭಾಗ್ಯನಗರ’ ಎಂದು ಬದಲಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement