ಕರ್ನಾಟಕದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜುಲೈ 7ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜುಲೈ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.
ಜುಲೈ 2ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.
ಜುಲೈ 3ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಸ್ವಯಂ ನಿವೃತ್ತಿ ಪಡೆಯಲು ಮುಂದಾದ ಹೆಚ್ಚುವರಿ ಎಸ್‌ಪಿ ಎನ್.ವಿ.ಭರಮನಿ

ಜುಲೈ 4ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 5ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 6 ಮತ್ತು 7ರಂದು ಉತ್ತರ ಕನ್ನಡ, ಉಡುಪಿ ದಕ್ಷಿಣ ಕನ್ನಡ, ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರು ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement