ಸ್ವಯಂ ನಿವೃತ್ತಿ ಪಡೆಯಲು ಮುಂದಾದ ಹೆಚ್ಚುವರಿ ಎಸ್‌ಪಿ ಎನ್.ವಿ.ಭರಮನಿ

ಬೆಳಗಾವಿ/ಧಾರವಾಡ: ಧಾರವಾಡ ಹೆಚ್ಚುವರಿ ಎಸ್‌ಪಿ ಎನ್.ವಿ. ಭರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅವರು ಸ್ವಯಂ ನಿವೃತ್ತಿ ಕೋರಿ ಸುಮಾರು ಒಂದು ತಿಂಗಳ ಹಿಂದೆಯೇ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.
ಸ್ವಯಂಪ್ರೇರಿತ ನಿವೃತ್ತಿಗೆ ಭರಮನಿ ಅವರು ಅರ್ಜಿ ಸಲ್ಲಿಸಿದ್ದರೂ ಈ ಬಗ್ಗೆ ಇಲಾಖೆ ಇನ್ನೂ ನಿರ್ಧರಿಸಬೇಕಿದೆ. ಹಿರಿಯ ಅಧಿಕಾರಿಗಳು ಸ್ವಯಂ ನಿವೃತ್ತಿ ತೆಗೆದುಕೊಳ್ಳದಂತೆ ಅವರ ಮನವೊಲಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಬೆಳಗಾವಿಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪೊಲೀಸ್ ಅಧಿಕಾರಿ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ತಮಗಾದ ಅವಮಾನಕ್ಕೆ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ ವಿರುದ್ಧ ಎಫ್‌ಐಆರ್‌ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement