ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ 9ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಅರಬ್ಬೀ ಸಮುದ್ರದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ. ಜುಲೈ 3 ರಿಂದ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ವರುಣನ ಅಬ್ಬರ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ತಿಳಿಸಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ, ಧಾರವಾಡ ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜುಲೈ 9 ವರೆಗೂ ಕರಾವಳಿಯಲ್ಲಿ ಭರ್ಜರಿ ಮಳೆಯಾಗಲಿದೆ ತಿಳಿಸಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿಯೂ ಜುಲೈ 9ರವರೆಗೆ ಭಾರಿ ಮಳೆಯಾಗಲಿದೆ. ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಕಲಬುರ್ಗಿ, ಗದಗ, ಬೀದರ ಜಿಲ್ಲೆಗಳಿಗೆ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಪ್ರಮುಖ ಸುದ್ದಿ :-   ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement