ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ), ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಿದೆ.
ಇಂದು, ಶುಕ್ರವಾರ (ಜುಲೈ ೪) ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನನ್ನು ಎನ್‌ಐಎ ತಂಡ ವಶಕ್ಕೆ ತೆಗೆದುಕೊಂಡಿದೆ.
ಪ್ರವೀಣ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೆ ಎನ್‌ಐಎ 21 ಆರೋಪಿಗಳನ್ನು ಬಂಧಿಸಿದ್ದು, ಇದೀಗ ಇನ್ನೋರ್ವ ಪ್ರಮುಖ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನನ್ನು ಬಂಧಿಸಿದೆ.
ಬಂಧಿತ ಆರೋಪಿ ಅಬ್ದುಲ್ ರೆಹಮಾನ್ ಪ್ರಮುಖ ದಾಳಿಕೋರರಿಗೆ ಮತ್ತು ಪ್ರಕರಣದಲ್ಲಿ ಭಾಗಿಯಾಗಿದ್ದ ಇತರರಿಗೆ ಆಶ್ರಯ ನೀಡಿದ್ದಾನೆ ಎಂದು ತನಿಖೆಯಿಂದ ಬಹಿರಂಗವಾಗಿದೆ. ಹೀಗಾಗಿ ತಲೆಮರೆಸಿಕೊಂಡಿದ್ದ ಈತನ ಸುಳಿವು ನೀಡಿದರೆ 4 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿತ್ತು.
ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸದಸ್ಯರು ಪ್ರವೀಣ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳಿಂದ ತಲೆರೆಸಿಕೊಂಡಿದ್ದ ಆರೋಪಿ ಅಬ್ದುಲ್ ರೆಹಮಾನ್‌ನನ್ನು ಈಗ ಎನ್‌ಐಎ ಬಂಧಿಸಿದೆ. ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 28 ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ