ಕಾರವಾರ : ಉತ್ತರ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಕಾರವಾರ ತಾಲೂಕಿನ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭರ್ತಿಯಾಗುವ ಸನಿಹಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 4 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ.
ಜಲಾಶಯದಿಂದ ನೀರು ಹೊರಬಿಡಲು ಜಿಲ್ಲಾಡಳಿತ ನಿಗದಿತ ಪಡಿಸಿದ 30 ಮೀಟರ್ ಮಟ್ಟ ತಲುಪಿದ ಹಿನ್ನೆಲೆಯಲ್ಲಿ ಹಾಗೂ ನೀರಿನ ಒಳ ಹರಿವು ಹೆಚ್ಚಿರುವ ಕಾರಣ 4 ಕ್ರಸ್ಟ್ ಗೇಟ್ ತೆರೆದು 12,000 ಕ್ಯೂಸೆಕ್ ಹೆಚ್ಚುವರಿ ನೀರು ಬಿಡಲಾಗುತ್ತಿದೆ.
ಪವರ್ ಜನರೇಷನ್ ಮೂಲಕ 21000 ಕ್ಯೂಸೆಕ್ ಬಿಡಲಾಗುತ್ತಿದ್ದು, ಒಟ್ಟೂ 33000 ಕ್ಯೂಸೆಕ್ ನೀರು ಹೊರ ಹೋಗುತ್ತಿದೆ ಎಂದು ಕೆಪಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದರಿಂದ ಜಲಾಶಯದ ಕೆಳಗಿನ ಪ್ರದೇಶಗಳಲ್ಲಿ ಆತಂಕ ಎದುರಾಗಿದ್ದು ಹೆಚ್ಚು ಮಳೆಯಾದರೆ ನೀರಿನ ಪ್ರಮಾಣ ಹೆಚ್ಚಾಗಿ ಮುಳುಗಡೆಯ ಆತಂಕ ಎದುರಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ