ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾಸಂಸ್ಥಾನದ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು‌ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ‌.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಸೋಂದಾ‌ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ ವ್ಯಾಸ ಪೂಜೆ ನಡೆಸಿ … Continued

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

ನವದೆಹಲಿ: ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ಅಧಿಕಾರಿಗಳು ಈತನನ್ನು ಹಸ್ತಾಂತರಿಸಬೇಕು ಎಂದು ಕೋರಿಕೆ ಸಲ್ಲಿಸಿದ ನಂತರ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯ ಕಿರಿಯ ಸಹೋದರ ನೇಹಲ್ ದೀಪಕ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) … Continued

ಇದೆಂಥ ಪವಾಡ…| ಒಂದೇ ಗೋಡೆ, 4 ಲೀಟರ್ ಬಣ್ಣ ಬಳಿಯಲು 233 ಕೆಲಸಗಾರರ ಬಳಕೆ…! ಶಾಲೆಯ ಗುತ್ತಿಗೆದಾರನ ಬಿಲ್ ವೈರಲ್‌

ಸಕಂಡಿ: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಗಣಿತ ಮತ್ತು ಮಾನವಶಕ್ತಿಯ ಪವಾಡವೇ ನಡೆದಿದೆ ಎಂದು ವರದಿಯಾಗಿದೆ. ಸಕಂಡಿ ಗ್ರಾಮದ ಸರ್ಕಾರಿ ಶಾಲೆಯ ಒಂದು ಗೋಡೆಗೆ ನಾಲ್ಕು ಲೀಟರ್ ಬಣ್ಣವನ್ನು ಹಚ್ಚಲು 168 ಕಾರ್ಮಿಕರು ಮತ್ತು 65 ಮೇಸ್ತ್ರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ. ಇದರ ಬಿಲ್‌ ಈಗ ಆನ್ಲೈನ್‌ನಲ್ಲಿ ವೈರಲ್‌ ಆದ ನಂತರ ವ್ಯಾಪಕ ಟೀಕೆಗೆ ಗುರಿಯಾಗಿದೆ. … Continued

ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ಮಹಾಲಕ್ಷ್ಮೀ ಜಾತ್ರೆಯಲ್ಲಿ ಜನಸಂದಣಿಯ ಮಧ್ಯೆಯೇ ಶನಿವಾರ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಶಕದ ಬಳಿಕ ಗೋಕಾಕದಲ್ಲಿ ಅದ್ದೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. … Continued

ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಧರಿಸಿದ ನಂತರ ಮದುವೆಯಾಗಲು ನಿರಾಕರಿಸಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಬಿಜೆಪಿ ಮುಖಂಡ ಹಾಗೂ ಜಗನ್ನಿವಾಸ ರಾವ್‌ ಅವರ ಪುತ್ರನಾದ ಕೃಷ್ಣ ಜೆ.ರಾವ್‌ ಎಂಬಾತನನ್ನು ಪೊಲೀಸರು … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ಮನೆ ಮುಂದೆಯೇ ಗುಂಡು ಹಾರಿಸಿ ಬಿಜೆಪಿ ನಾಯಕ-ಖ್ಯಾತ ಉದ್ಯಮಿ ಗೋಪಾಲ ಖೇಮ್ಕಾ ಹತ್ಯೆ

ಪಾಟ್ನಾ : ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಗುಂಡಿಕ್ಕಿ ಕೊಲ್ಲಲಾಗಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪಣಾಚೆ ಹೋಟೆಲ್ ಪಕ್ಕದಲ್ಲಿರುವ ತಮ್ಮ ಮನೆಗೆ ಅವರು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಟ್ವಿನ್ … Continued