ತುಮಕೂರು : ಲಾಡ್ಜ್‌ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ

ತುಮಕೂರು : ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್​ ಬಾಡಿಗೆ ಪಡೆದುಕೊಂಡಿದ್ದ ಅವರು ಅಲ್ಲೇ ಫ್ಯಾನ್​ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಾಗರಾಜಪ್ಪ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಸಬ್​ ಇನ್ಸ್ಪೆಕ್ಟರ್ ಆಗಿದ್ದರು. ಜುಲೈ 1 ರಂದು ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಭಾನುವಾರ ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದ್ದು, ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನಾಗರಾಜು ಅವರು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ಜೀವನದ ಕುರಿತು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement