ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

ಪಾಟ್ನಾ: ಈ ವರ್ಷದ ಕೊನೆಯಲ್ಲಿ ಚುನಾವಣೆಗೆ ಸಜ್ಜಾಗಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಆರ್‌ಜೆಡಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಲಿದ್ದು, ಸೋಮವಾರ ವಿಚಾರಣೆ ನಡೆಸುವಂತೆ ಕೋರಿದ್ದಾರೆ.
ಜೂನ್ 24 ರಂದು, ಚುನಾವಣಾ ಸಂಸ್ಥೆಯು ಬಿಹಾರದಲ್ಲಿ ಅರ್ಹ ನಾಗರಿಕರು ಮಾತ್ರ ಮತ ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳಲು ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಕೈಗೊಳ್ಳಲು ಸೂಚನೆಗಳನ್ನು ನೀಡಿತು. ತ್ವರಿತ ನಗರೀಕರಣ, ಆಗಾಗ್ಗೆ ವಲಸೆ, ಯುವ ನಾಗರಿಕರು ಮತ ಚಲಾಯಿಸಲು ಅರ್ಹರಾಗುವುದು, ಸಾವುಗಳು ಮತ್ತು ವಿದೇಶಿ ಅಕ್ರಮ ವಲಸಿಗರ ಹೆಸರುಗಳನ್ನು ಸೇರಿಸುವುದರಿಂದ ಈ ಪ್ರಕ್ರಿಯೆ ಅಗತ್ಯವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮತದಾರರ ಪಟ್ಟಿಯನ್ನು ಪರಿಷ್ಕರಿಸುವಲ್ಲಿ ಸಾಂವಿಧಾನಿಕ ಮತ್ತು ಕಾನೂನು ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಹಾರದ ಮತದಾರರು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿಗೆ ಬಿಜೆಪಿ ಪಕ್ಷಕ್ಕೆ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ. ಈ ಪ್ರಕ್ರಿಯೆಯಿಂದಾಗಿ ಸುಮಾರು ಎಂಟು ಕೋಟಿ ಜನರು ತೊಂದರೆ ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗವು ಭಾನುವಾರ ಬಿಹಾರದಲ್ಲಿ ಮೊದಲ ಹಂತದ ಪ್ರಕ್ರಿಯೆಯನ್ನು ಸುಗಮವಾಗಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದು, ಆಡಳಿತ ಪಕ್ಷದ ಪರವಾಗಿ ಪ್ರಕ್ರಿಯೆಯನ್ನು ಕುಶಲತೆಯಿಂದ ನಿರ್ವಹಿಸಲಾಗುತ್ತಿದೆ ಎಂಬ ಆರೋಪಗಳನ್ನು ನಿರಾಕರಿಸಿದೆ. “ಜೂನ್ 24, 2025 ರ ಎಸ್‌ಐಆರ್ ಸೂಚನೆಗಳ ಪ್ರಕಾರ   ನಡೆಸಲಾಗುತ್ತಿದೆ ಎಂದು ಅದು ಹೇಳಿದೆ. ಮತದಾರರು ತಮ್ಮ ದಾಖಲೆಗಳನ್ನು ಸಲ್ಲಿಸಲು ಜುಲೈ 25 ರವರೆಗೆ ಸಮಯ ನೀಡಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 1 ರಂದು ನೀಡಲಾಗುತ್ತದೆ.

ಪ್ರಮುಖ ಸುದ್ದಿ :-   ವೀಡಿಯೊ..| ಬಾಲಕರ ಹುಚ್ಚಾಟ : ರೀಲ್‌ ಸ್ಟಂಟ್‌ ಮಾಡಲು ವೇಗವಾಗಿ ಚಲಿಸುತ್ತಿದ್ದ ರೈಲಿನ ಕೆಳಗೆ ಮಲಗಿದ ಬಾಲಕ : ಮೂವರು ಅಪ್ರಾಪ್ತರ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement