ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆಕ್ರೋಶಕ್ಕೆ ಕಾರಣವಾದ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.
ಜೂನ್ 30 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಕುಶಾಲ್ ಎರಡು ವರ್ಷಗಳಿಂದ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ, ಆದರೆ ಕೆಲವು ತಿಂಗಳ ಹಿಂದೆ ಅವರಿಬ್ಬರ ನಡುವೆ ಅದು ಮುರಿದುಬಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಹುಡುಗಿ ಇನ್ನೊಬ್ಬ ವ್ಯಕ್ತಿಯನ್ನು ಪ್ರೀತಿಸಲು ಅರಂಭಿಸಿದಳು. ಇದರಿಂದ ಕೋಪಗೊಂಡ ಕುಶಾಲ್ ಹುಡುಗಿಗೆ ಕೆಲವು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಅಕೆ ತನ್ನ ಪ್ರಿಯಕರನಿಗೆ ತಿಳಿಸಿದ್ದಾಳೆ.
ನಂತರ ಆತ ಮತ್ತು ಸ್ನೇಹಿತರು ಕುಶಾಲ್ ಮೇಲೆ ಹಲ್ಲೆ ನಡೆಸಲು ಯೋಜಿಸಿದ್ದರು ಎಂದು ಆರೋಪಿಸಲಾಗಿದೆ. ನಂತರ ಆರೋಪಿಗಳು ಈತನನ್ನು ಕಾರಿನಲ್ಲಿ ಅಪಹರಿಸಿ, ಸರೋವರದ ಬಳಿಯ ನಿರ್ಜನ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿದರು.
ಪೊಲೀಸರ ಪ್ರಕಾರ, ಎಂಟು ಜನರ ಗುಂಪು ಕುಶಾಲ್ ಅವರನ್ನು ಕಾರಿನಲ್ಲಿ ಅಪಹರಿಸಿ ದೂರದ ಸ್ಥಳಕ್ಕೆ ಕರೆದೊಯ್ದರು. ಅಲ್ಲಿ, ಅವರು ಈತನನ್ನು ವಿವಸ್ತ್ರಗೊಳಿಸಿ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ ಮತ್ತು ರೇಣುಕಾಸ್ವಾಮಿ ಅವರ ಭೀಕರ ಹತ್ಯೆಯಂತೆ ಆಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.
ಸೋಲದೇವನಹಳ್ಳಿ ಪೊಲೀಸರು ದರೋಡೆ ಮತ್ತು ಅಪಹರಣದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಎಲ್ಲಾ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದೃಢಪಡಿಸಿದ್ದಾರೆ. “ನಾವು ಎಂಟು ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ