ಬೆಳಗಾವಿ: ಒಂದೇ ಕುಟುಂಬದ ನಾಲ್ವರು ವಿಷಸೇವಿಸಿದ ನಂತರ ಮೂವರು ಸಾವಿಗೀಡಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಖಾಸಬಾಗದ ಜೋಶಿ ಮಾಳದ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಮೃತರನ್ನು ಮಂಗಳಾ ಕುರಡೇಕರ (70), ಪುತ್ರ ಸಂತೋಷ ಕುರಡೇಕರ (44), ಪುತ್ರಿ ಸುವರ್ಣ ಕುರಡೇಕರ (42) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಪುತ್ರಿ ಸುನಂದಾ ಕುರಡೇಕರ ವಿಷ ಸೇವಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಮೃತದೇಹಗಳ ಬಳಿ ಮರಾಠಿಯಲ್ಲಿ ಬರೆದ ಡೆತ್ನೋಟ್ ಸಹ ಪತ್ತೆಯಾಗಿದೆ ಎನ್ನಲಾಗಿದೆ.
ಮೂವರೂ ಮಕ್ಕಳ ಮದುವೆ ಆಗಿರಲಿಲ್ಲ. ಹೀಗಾಗಿ, ತಾಯಿ ಜೊತೆಗೆ ಎಲ್ಲರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅದೇ ರೀತಿ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ