ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾದ ರವಿಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ವಿಚಾರಣೆ ನಡೆಸಿದರು.
ಅರ್ಜಿದಾರರು 10 ದಿನಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಮತ್ತು ಒಂದು ವೇಳೆ ಪೊಲೀಸರು ಅವರನ್ನು ಬಂಧಿಸಿದ್ದೇ ಆದರೆ ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಪಡೆದು ಬಿಡುಗಡೆ ಮಾಡಬೇಕು” ಎಂದು ಷರತ್ತು ವಿಧಿಸಿ ಅರ್ಜಿ ವಿಲೇವಾರಿ ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣಶ್ಯಾಮ ವಾದಿಸಿದರು.
ಜುಲೈ 1ರಂದು ಬಿಜೆಪಿ ವತಿಯಿಂದ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರವಿಕುಮಾರ ಅವರು ಶಾಲಿನಿ ರಜನೀಶ್‌ ಕುರಿತು ಅಸಂಸದೀಯ ಪದ ಬಳಸಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ರವಿಕುಮಾರವಿರುದ್ಧ ವಿಧಾನ ಸೌಧ ಠಾಣೆಯಲ್ಲಿ ಭಾರತೀಯ ಬ್ಯಾಯ ಸಂಹಿತೆ ಸೆಕ್ಷನ್‌ಗಳಾದ 351 (3), 75 (3) ಮತ್ತು 79 ಅಡಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement