ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ವಿವರಗಳು ಲಭ್ಯವಾಗಬೇಕಾಗಿದೆ. ಇ.ಡಿ. ಅಧಿಕಾರಿಗಳು ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (PMLA) 2002 ರ ಅಡಿಯಲ್ಲಿ ಈ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಶಾಸಕ ಸುಬ್ಬಾರೆಡ್ಡಿ ಅವರ ಆಸ್ತಿ ವಿವರಗಳು, ಹಣಕಾಸು ವ್ಯವಹಾರಗಳು, ಮತ್ತು ಯಾವುದೇ ಅಕ್ರಮ ಸಂಪರ್ಕಗಳ ಬಗ್ಗೆ ಸದ್ಯ ತನಿಖೆ ನಡೆಸಲಾಗುತ್ತಿದೆ. ವಿದೇಶಗಳಲ್ಲಿನ ಬ್ಯಾಂಕ್​ ಅಕೌಂಟ್​​, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದಾರೆ.

ಪ್ರಮುಖ ಸುದ್ದಿ :-   ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement