ರಾಜಕಾರಣಿಗಳ ಹೆಸರು ಬಳಸಿ 30 ಕೋಟಿ ರೂ. ವಂಚನೆ ಆರೋಪ ; ಮಹಿಳೆ ಬಂಧನ

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ  ಸೇರಿದಂತೆ ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕೀಯ ನಾಯಕರು ಗೊತ್ತು ಎಂದು ಹೇಳಿ ಪರಿಚಿತರೆಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪದ ಮೇರೆಗೆ ಸವಿತಾ ಎಂಬ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಕಿಟ್ಟಿ ಪಾರ್ಟಿಯಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೆಟ್‌ ಮಾಡುತ್ತಿದ್ದ ಈಕೆ ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಸುಮಾರು 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ ಸವಿತಾ ತನಗೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಸಚಿವರು ಹಾಗೂ ಹಲವು ರಾಜಕಾರಣಿಗಳ ಪರಿಚಯವಿದೆ ಎಂದು ಹೇಳಿಕೊಳ್ಳುತ್ತಿದ್ದಳು. ಬಳಿಕ ಅವರನ್ನು ಪುಸಲಾಯಿಸಿ ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದಳು ಎಂದು ಹೇಳಲಾಗಿದೆ.
ಈ ಹಿಂದೆ ಅಮೆರಿಕದಿಂದ ಕಡಿಮೆ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಾಪಸ್ ಹಣ ನೀಡದೇ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ  ಸಂಬಂಧ ಬಂಧನವೂ ಆಗಿತ್ತು ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement