ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (Karnataka Public School) ಎಲ್‌ಕೆಜಿ (LKG)ಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲು ನಿರ್ಧರಿಸಿದೆ.

ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ ಹಾಗೂ ಕಲಿಕಾ ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನು ಸರ್ಕಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಎಲ್‌ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ. ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು | ತನ್ನ ಒಪ್ಪಿಗೆಯಿಲ್ಲದೆ ಇನ್‌ಸ್ಟಾಗ್ರಾಮ್ ವೀಡಿಯೊ ಪೋಸ್ಟ್ ; ಮಹಿಳೆಯ ದೂರಿನ ನಂತರ ವ್ಯಕ್ತಿಯ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement