ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ.
ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು,  ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.
ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಜುಲೈ 4 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಕುರಿತಂತೆ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಶ್ರುತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕನ್ನಡದಲ್ಲಿ ಅಮೃತಧಾರೆ, ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ನಟಿಸಿದ್ದಾರೆ.
20 ವರ್ಷದ ಹಿಂದೆ ಶ್ರುತಿ ಅವರು ಅಂಬರೀಶ ಎಂಬವರನ್ನು ಪ್ರೀತಿಸಿ ಶ್ರುತಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹನುಮಂತ ನಗರದಲ್ಲಿ ಲೀಸ್‌ಗೆ ಮನೆ ಪಡೆದು ದಂಪತಿ ವಾಸವಾಗಿದ್ದರು.
ಇಬ್ಬರ ನಡುವೆ ಹೊಂದಾಣಿಕೆ ಸರಿ ಇಲ್ಲದ ಕಾರಣ ಕಳೆದ ಏಪ್ರಿಲ್‌ನಲ್ಲಿ ಪತಿಯಿಂದ ದೂರವಾಗಿ ಅಣ್ಣನ ಮನೆಯಲ್ಲಿ ಶ್ರುತಿ ನೆಲೆಸಿದ್ದರು ಎಂದು ಹೇಳಲಾಗಿದೆ. ಈ ನಡುವೆ ಮನೆಯ ಲೀಸ್‌ ಹಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. ಈ ಕುರಿತು ಶ್ರುತಿ ಹನುಮಂತನಗರ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದರು. ಕಳೆದ ಗುರುವಾರವಷ್ಟೇ ರಾಜಿ ಸಂಧಾನ ಮಾಡಿಕೊಂಡು ಗಂಡನ ಜೊತೆಗೆ ಒಂದಾಗಿದ್ದರು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement