ಮಂಗಳೂರು | ಎಂಆರ್ ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆ ; ಇಬ್ಬರು ಸಾವು

ಮಂಗಳೂರು : ಎಂಆರ್‌ಪಿಎಲ್‌ ಘಟಕದಲ್ಲಿ ವಿಷಾನಿಲ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಎಂಆರ್ ಪಿಎಲ್ ನ ಒಮ ಮತ್ತು ಎಸ್‌ (OM‌‌‌‌&S) ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮೃತರು ಪ್ರಯಾಗರಾಜ್‌ನ ದೀಪಚಂದ್ರ (33) ಮತ್ತು ಕೇರಳದ ಬಿಜಿಲ್‌ಪ್ರಸಾದ (33) ಎಂದು ಗುರುತಿಸಲಾಗಿದೆ. ರಕ್ಷಣೆಗೆ ಹೋದ ಗದಗದ ವಿನಾಯಕ ಎಂಬುವರು ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದ್ದ ಇಬ್ಬರು ಸಿಬ್ಬಂದಿ ಅಸ್ವಸ್ಥಗೊಂಡು ಸಾವಿಗೀಡಾಗಿದ್ದಾರೆ. ಎಂಆರ್‌ಪಿಎಲ್‌ನ ಒಎಂಎಸ್ (ಆಯಿಲ್ ಮೂಮೆಂಟ್ ಸರ್ವೀಸ್) ನಲ್ಲಿ ಘಟನೆ ನಡೆದಿದೆ. ಎಂಎಂಎಸ್ ವಿಭಾಗದ ಟ್ಯಾಂಕ್ ಮೇಲ್ಛಾವಣಿಗೆ ತೆರಳಿದ್ದಾಗ ಇಬ್ಬರು ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆಯ ಸಮಯದಲ್ಲಿ ‌ಇಬ್ಬರು ಸಾವಿಗೀಡಾಗಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಬಂದ ನಂತರ ಜಿಲ್ಲಾಧಿಕಾರಿ ಸಂತೋಷಕುಮಾರ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಎಂಆರ್‌ಪಿಎಲ್ ಆಡಳಿತ ಮಂಡಳಿ ಸಮಿತಿ ರಚನೆ ಮಾಡಿದೆ. ಗ್ರೂಪ್ ಜನರಲ್ ಮ್ಯಾನೇಜರ್ ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement