ಮಂತ್ರಾಲಯ : ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನಾಪತ್ತೆ

ರಾಯಚೂರು : ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದಾಗ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಯುವಕರನ್ನು ಹಾಸನದ ಅರಸೀಕೆರೆ ತಾಲೂಕಿನ ಜಾಗವಲ್ ಗ್ರಾಮದ ಅಜಿತ (20), ಪ್ರಮೋದ (19) ಹಾಗೂ ಸಚಿನ್ (20) ಎಂದು ಗುರುತಿಸಲಾಗಿದೆ.
ಶನಿವಾರ (ಜುಲೈ 12) ಸ್ನೇಹಿತರ ತಂಡ ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಬಂದಿತ್ತು. ದರ್ಶನಕ್ಕೆ ಮೊದಲು ತುಂಗಭದ್ರಾ ನದಿಗೆ ಸ್ನಾತಕ್ಕೆ ತೆರಳಿದ್ದು, ಬಳಿ ಐವರು ಸ್ಥಾನ ಮಾಡುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ನೀರಿನ ರಭಸಕ್ಕೆ ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement