ಹಾಸನ : ಚಿಕ್ಕತಿರುಪತಿ ಜಾತ್ರೆಯಲ್ಲಿ ಆಹಾರ ಸೇವಿಸಿ 50 ಭಕ್ತರು ಅಸ್ವಸ್ಥ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ, ಚಿಕ್ಕತಿರುಪತಿ ಎಂದೇ ಖ್ಯಾತವಾಗಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಜಾತ್ರಾ (Jatre) ಮಹೋತ್ಸವದ ವೇಳೆ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.
ಖಾಸಗಿ ಸಂಸ್ಥೆಯೊಂದರಿಂದ ವಿತರಿಸಲಾದ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಭಕ್ತರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 ಭಕ್ತರಿಗೆ ಬಿಸಬೇಳೆ ಬಾತ್‌ ಹಾಗೂ ಮೊಸರನ್ನವನ್ನುವಿತರಿಸಲಾಗಿತ್ತು, ಇದನ್ನು ಸೇವಿಸಿದ ಕೆಲ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ.

ಮಾಲೆಕಲ್ ತಿರುಪತಿ ದೇವಾಲಯವನ್ನು ಚಿಕ್ಕತಿರುಪತಿ ಎಂದು ಕರೆಯಲಾಗುತ್ತದೆ. ಈ ದೇವಾಲಯವು ಶ್ರೀ ವೆಂಕಟರಮಣ ಸ್ವಾಮಿ ಮತ್ತು ಶ್ರೀ ಮಹಾಲಕ್ಷ್ಮಿ ಪೂಜಿಸುವ ಸ್ಥಳವಾಗಿದ್ದು, ಪ್ರತಿವರ್ಷ ಜಾತ್ರಾ ಮಹೋತ್ಸವ ನಡೆಯುತ್ತದೆ.
ಪ್ರಸಾದ ಸೇವಿಸಿದ ಕೆಲವೇ ಗಂಟೆಗಳಲ್ಲಿ, ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ಹಲವು ಭಕ್ತರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಒಟ್ಟು 50ಕ್ಕೂ ಅಧಿಕ ಮಂದಿ ಈ ಲಕ್ಷಣಗಳಿಂದ ಬಳಲುತ್ತಿದ್ದರು. ಸ್ಥಳೀಯ ಆಡಳಿತವು ತಕ್ಷಣ ಕ್ರಮ ಕೈಗೊಂಡು, ಅಸ್ವಸ್ಥರನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿತು. ಸದ್ಯ, 30ಕ್ಕೂ ಹೆಚ್ಚು ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಅಸ್ವಸ್ಥರಾದವರ ಪೈಕಿ 20 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement