ಗಂಗೊಳ್ಳಿ : ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಉಡುಪಿ : ಸಮುದ್ರದಲ್ಲಿ ತೆರೆಗಳಿಗೆ ಸಿಲುಕಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರದಲ್ಲಿ ಮಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.
ನಾಪತ್ತೆಯಾದ ಮೀನುಗಾರರನ್ನು ಸುರೇಶ ಖಾರ್ವಿ (45), ರೋಹಿತ್ ಖಾರ್ವಿ (38) ಹಾಗೂ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ.
ಮೀನುಗಾರರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯ ಮಂಗಳವಾರ ಸಂಭವಿಸಿದೆ.
ಮೀನುಗಾರಿಕಾ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ. ಈಜು ಗೊತ್ತಿದ್ದರೂ ಸಮುದ್ರದ ಅಬ್ಬರ ಅಲೆಗಳ ರಭಸಕ್ಕೆ ದೋಣಿಗೆ ಮರಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಮೂವರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement