ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬದಲಿ ಮಾರ್ಗ ಬಳಸಬೇಕಾಗಿದೆ. ಕಾರು, ಬೈಕ್​ಗಳಿಗೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದ್ದು, ಸ್ಥಳದಲ್ಲಿ ಅಧಿಕಾರಿಗಳು ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ತೆರವಿಗೆ ಕೆಲ ಗಂಟೆಗಳು ಬೇಕಾಗಬಹುದು.
ರಾಷ್ಟ್ರೀಯ ಹೆದ್ದಾರಿ ‌.75 ರ ಧರ್ಮಸ್ಥಳ ಕ್ರಾಸ್​​​ನಿಂದ ಸ್ವಲ್ಪ ಮುಂದೆಯೂ ಗುಡ್ಡ ಕುಸಿತ ಉಂಟಾಗಿದ್ದು, ಕಲ್ಲುಗಳು ರಸ್ತೆಗೆ ಬಂದು ಬಿದ್ದಿವೆ.

0 / 5. 0

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement