
ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿಕೆ ಶಿವಕುಮಾರ್ ಅವರ ಬೆಂಗಾವಲಿನ ಕಾರು ಪಲ್ಟಿಯಾಗಿದೆ. ಎಸ್ಕಾರ್ಟ್ ವಾಹನ ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಳಿತಿದ್ದ ಕಾರನ್ನು ಹಿಂಬಾಲಿಸುತ್ತಿತ್ತು ಬೆಂಗಾವಲು ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಹಿನ್ನೆಲೆ, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಡಿಕೆ ಶಿವಕುಮಾರ ಅವರಿದ್ದ ಕಾರು ಹಿಂದೆ ಇದ್ದ ಕಾರಣ ಅವರಿಗೆ ಯಾವುದೇ ತೊಂದರೆಯಾಗಿಲ್ಲ.



ನಿಮ್ಮ ಕಾಮೆಂಟ್ ಬರೆಯಿರಿ